Kannada NewsKarnataka NewsLatest

*BREAKING: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್​​ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಳಿಕ ಇದೀಗ ನ್ಯಾಯಾಲಯಗಳಿಗೆ ಬಾಂಬ್​​ ಬೆದರಿಕೆ ಸಂದೇಶ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ

ಇದೀಗ ಮೈಸೂರು ಜಿಲ್ಲಾ ನ್ಯಾಯಲಯಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ನ್ಯಾಯಾಲಕ್ಕೆ ಇ- ಮೇಲ್​ ಮೂಲಕ ಬಾಂಬ್​ ಬೆದರಿಕೆ ಸಂದೇಶ ರವಾನಿಸಲಾಗಿದೆ. ಕೋರ್ಟ್ ನಲ್ಲಿ ಬಾಂಬ್ ಇಡಲಾಗಿದ್ದು, ಸ್ಫೋಟಗೊಳ್ಳಲಿದೆ ಎಂದು ಸಂದೇಶ ರವಾನಿಸಲಾಗಿದೆ.

ವಿಷಯ ತಿಳಿಯುತ್ತಿದಂತೆ ನ್ಯಾಯಾಲಯಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ವಕೀಲರುಮ್ ಕೋರ್ಟ್ ಸಿಬ್ಬಂದಿಗಳನ್ನು ಹೊರ ಕಳುಹಿಸಿ ಕೋರ್ಟ್ ನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಮೈಸೂರಿನ ಚಾಮರಾಜಪುರಂನಲ್ಲಿ ಇರುವ ಇದೇ ನ್ಯಾಯಾಲಯದಲ್ಲಿ 8 ವರ್ಷದ ಹಿಂದೆ ಶೌಚಾಲಯದಲ್ಲಿ ಕುಕ್ಕರ್​ ಬಾಂಬ್​ ಸ್ಫೋಟವಾಗಿತ್ತು. ಇದೀಗ ಮತ್ತೆ ನ್ಯಾಯಾಲಕ್ಕೆ ಬಾಂಬ್ ಬೆದರಿಕೆ ಹಾಕಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button