ಪ್ರಗತಿವಾಹಿನಿ ಸುದ್ದಿ; ಮೈಸೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮೈಸೂರಿನ ಗ್ಲೋಬಲ್ ಎಜುಕೇಷನ್ ಟ್ರಸ್ಟ್ ನ ದಕ್ಷ ಕಾಲೇಜು ತನ್ನ ಮಹಿಳಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳ ಸಾಮಾನ್ಯ ರಜೆ ಜತೆ ಮುಟ್ಟಿನ ರಜೆ ನೀಡುವುದಾಗಿ ಕಾಲೇಜು ಆಡಳಿತ ಮಂಡಳಿ ಘೋಷಿಸಿದೆ. ವಾರಕ್ಕೊಂದು ರಜೆ, ಸಾಮಾನ್ಯ ರಜೆ ಜತೆಗೆ ಈ ರಜೆ ವೈಯಕ್ತಿಕ ವಿಭಾಗದ ರಜೆಗಳಲ್ಲಿ ಬರಲಿದೆ.
ದಕ್ಷ ಕಾಲೇಜು ಹಲವು ರೀತಿಯಲ್ಲಿ ದೇಶದ ಗಮನ ಸೆಳೆಯುತ್ತಿದ್ದು, ಕೋವಿಡ್ ಸಂದರ್ಭದಲ್ಲಿ ಕಾಲೇಜಿನಲ್ಲಿ ನರ್ಸ್ ಒಬ್ಬರನ್ನು ನೇಮಕಮಾಡಿಕೊಂಡಿದ್ದು, ತುರ್ತು ಚಿಕಿತ್ಸೆ ಸೇರಿದಂತೆ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ನಿಟ್ಟಿನಲ್ಲಿ ಹೆಸರುವಾಸಿಯಾಗಿದೆ.
ಇದೀಗ ಮುಟ್ಟಿನ ರಜೆ ನೀಡುವ ಮೂಲಕ ದೇಶದ ಗಮನ ಸೆಳೆದಿದ್ದು, ಕೆಲಸದ ಸ್ಥಳದಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದೆ. ಮಹಿಳೆಯರ ತಿಂಗಳ ರಜಾ ದಿನಗಳಲ್ಲಿ ಹೆಚ್ಚಿನ ಮಹಿಳೆಯರು ಮಾನಸಿಕ ಒತ್ತಡ, ದೈಹಿಕ ಸಮಸ್ಯೆ, ಬಳಲುವಿಕೆ, ಸುಸ್ತು ಹಲವು ಅನಾರೋಗ್ಯಗಳನ್ನು ಎದುರಿಸುತ್ತಾರೆ. ಮಹಿಳೆಯರ ಈ ಸಮಸ್ಯೆ ಅರ್ಥಮಾಡಿಕೊಂಡು ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮ ಕಾಲೇಜಿನಲ್ಲಿ ಮುಟ್ಟಿನ ರಜೆ ನೀಡಲಾಗುತ್ತಿದೆ ಎಂದು ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕಿ ಮಹಾಲಕ್ಷ್ಮಿ ಮಯ್ಯ ತಿಳಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ