ಪ್ರಗತಿವಾಹಿನಿ ಸುದ್ದಿ; ಮೈಸೂರು: ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ ಸಂಬಂಧ ವೈದ್ಯರು ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಮೈಸೂರಿನ ಸರ್ಕಾರಿ ವೈದ್ಯರು ಓಪಿಡಿ ಸೇರಿದಂತೆ ಹಲವು ಸೇವೆ ನಿಲ್ಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಜನರು ಸರ್ಕಾರಿ ವೈದ್ಯರಿಲ್ಲದೇ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿದ್ದಾರೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರು ಕೊರೊನಾ ಭೀತಿಯಿಂದಾಗಿ ಚಿಕಿತ್ಸೆ ನೀಡಲು ಹಿಂಜರಿಯುತ್ತಿದ್ದಾರೆ.
ಮೈಸೂರಿನ ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷರ ಜೊತೆ ಇಂದು ರಾಜ್ಯ ಸಂಘದ ಪದಾಧಿಕಾರಿಗಳ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸಂಘ ಆನ್‌ಲೈನ್ ಸಭೆ ನಡೆಸಲಿದೆ. ಇಂದಿನ ಸಭೆ ನಂತರ ರಾಜ್ಯವ್ಯಾಪಿ ಹೋರಾಟದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಸಭೆ ನಂತರ ಹೋರಾಟದ ರೂಪು ರೇಷೆ ಬಗ್ಗೆ ಚರ್ಚಿಸಲಾಗುತ್ತದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ