ಗರ್ಭಿಣಿ ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಮೈಸೂರು: ವರದಕ್ಷಿಣೆ ಕಿರುಕುಳ ತಾಳಲಾರದೇ ಗರ್ಭಿಣಿ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿಯನ್ನು ಲಕ್ಷ್ಮಿ (23) ಎಂದು ಗುರುತಿಸಲಾಗಿದೆ.

Home add -Advt

ಲಕ್ಷ್ಮಿ 10 ತಿಂಗಳ ಹಿಂದೆ ಹುಣಸೂರಿನ ಯೋಗೇಶ್ ಜೊತೆ ಮದುವೆಯಾಗಿದ್ದರು. ಆದರೆ ತಮ್ಮ ಗಂಡನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಕ್ಷ್ಮಿ ಪೋಷಕರು ವರದಕ್ಷಿಣೆ ಎಂದು ಮದುವೆ ವೇಳೆ ಯೋಗೇಶ್ ಗೆ 50 ಲಕ್ಷ ದುಡ್ಡು, 400 ಗ್ರಾಂ ಚಿನ್ನ ನೀಡಿದ್ದರು. ಆದರೆ ಮದುವೆ ಸಮಯದಲ್ಲಿ ಒಂದು ನಿವೇಶನ ಕೊಡುತ್ತೇವೆ ಎಂದು ಲಕ್ಷ್ಮಿಯ ಪೋಷಕರು ಒಪ್ಪಿಕೊಂಡಿದ್ದರಂತೆ. ಆದರೆ ನಿವೇಶನ ನೀಡುವುದು ವಿಳಂಬವಾಗಿತ್ತು. ಇದೇ ಕಾರಣದಿಂದ ಲಕ್ಷ್ಮಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆಕೆಯ ಪೋಷಕರು ಆರೋಪ ಮಾಡಿದ್ದಾರೆ.

ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Related Articles

Back to top button