
ಪ್ರಗತಿವಾಹಿನಿ ಸುದ್ದಿ; ಮೈಸೂರು: ನಕಲಿ ಮರಣ ಪ್ರಮಾಣ ಪತ್ರ, ವಂಶವೃಕ್ಷ ಸೃಷ್ಟಿಸಿ ಅಕ್ರಮವೆಸಗುತ್ತಿದ್ದ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಟಿ.ನರಸಿಪುರ ತಾಲೂಕು ಕಚೇರಿ ಹಿಂದಿನ ರಾಜಸ್ವ ನಿರೀಕ್ಷಕರಾಗಿದ್ದ ಹಾಲಿ ಆಹಾರ ನಿರೀಕ್ಷಕ ದೇವಣ್ಣ ಕೆ, ಟಿ.ನರಸೀಪುರ ಭೈರಾಪುರ ಹಿಂದಿನ ಗ್ರಾಮ ಆಡಳಿತ ಅಧಿಕಾರಿಯಾಗಿದ್ದ ಹಾಲಿ ಜಯಪುರ ಮೃತ್ತ ಗ್ರಾಮ ಆಡಳಿತಾಧಿಕಾರಿಯಾಗಿರುವ ಪ್ರದೀಪ್ ಸಿಂಗ್, ಟಿ.ನರಸಿಪುರ ತಾಲೂಕು ಕಚೇರಿ ಗ್ರಾಮ ಆಡಳಿತ ಅಧಿಕಾರಿ ಭೂಮಿಕೇಂದ್ರದ ಹಂಸಲೇಖ ಅಮಾನತುಗೊಂಡವರು.
ಬೇನಾಮಿ ವ್ಯಕ್ತಿಗಳಿಗೆ ಪೌತಿಖಾತೆ ಮಾಡಿಕೊಟ್ಟಿದ್ದ ಆರೋಪದಡಿ ಐವರ ವಿರುದ್ಧ ಆರೋಪ ಕೇಳಿಬಂದಿತ್ತು. ಅವರಲ್ಲಿ ಈ ಮೂವರು ಅಧಿಕಾರಿಗಳ ವಿರುದ್ಧದ ಆರೋಪ ಖಚಿತವಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮುವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ