Film & EntertainmentPolitics

*ಮೈಸೂರಿನಲ್ಲಿ ಚಿತ್ರನಗರಿ: ಸಿಎಂ ನೇತೃತ್ವದಲ್ಲಿ ಅಧಿಕಾರಿಗಳ ಸಭೆ*

ಪ್ರಗತಿವಾಹಿನಿ ಸುದ್ದಿ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾ ವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಯಿತು.

ಸಭೆಯ ಮುಖ್ಯಾಂಶಗಳು ಹೀಗಿವೆ:

• ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಸೂಚಿಸಿದರು.

• ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್‌ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು.

• ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯುವಂತೆ ಸೂಚಿಸಿದರು.

• ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.

• ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ, ಜಮೀನಿಗೆ ಕಾಂಪಾಂಡ್‌ ನಿರ್ಮಿಸಲು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.

• ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.

• ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರ ನಿರ್ಮಾಣವಾಗಬೇಕು ಎಂದು ಹೇಳಿದರು.

• ಹೈದ್ರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲು ಸೂಚನೆ ನೀಡಿದರು.

• ಸರ್ಕಾರಕ್ಕೆ ಹೊರೆಯಾಗದಂತೆ ಚಿತ್ರನಗರಿ ನಿರ್ಮಾಣವಾಗಬೇಕು. ಚಿತ್ರನಗರಿ ಸ್ವರೂಪ ಕುರಿತಾಗಿ ಸಮಗ್ರವಾದ ವರದಿಯನ್ನು ಸಲ್ಲಿಸಲು ಸೂಚಿಸಿದರು.

• ಚಿತ್ರ ನಗರಿಯಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಪ್ರಸ್ತಾವನೆಯನ್ನು ಸಲ್ಲಿಸಲು ಅವರು ಸೂಚನೆ ನೀಡಿದರು.

• ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್‌, ಕಂದಾಯ ಸಚಿವ ಕೃಷ್ಣಭೈರೇಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್‌ ಚಂದ್ರ, ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button