Latest

ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ; ಎಚ್ಚರಿಕೆ ಬೆನ್ನಲ್ಲೇ ಗುಂಬಜ್ ಮೇಲೆ ಕಳಶ ಪ್ರತ್ಯಕ್ಷ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಗುಂಬಜ್ ಮಾದರಿಯಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.

ನ. 13ರಂದು ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು, ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್​ ನಿಲ್ದಾಣ ನಿರ್ಮಿಸುವಂತಿಲ್ಲ ಎಂದು ಹೇಳಿದ್ದಾರೆ.ಮೈಸೂರಿನ ಊಟಿ ರಸ್ತೆಯ ಬಸ್ ನಿಲ್ದಾಣದ ಮೇಲೆ ಗುಂಬಜ್‍ಗಳು ಇರುವುದನ್ನು ಗಮನಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಅಕ್ಕ ಪಕ್ಕ ಚಿಕ್ಕ ಗುಂಬಜ್‍ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್‌ಗಳಿಗೆ ಹೇಳಿದ್ದೇನೆ. ಮೂರು, ನಾಲ್ಕು ದಿನ ಟೈಮ್ ಕೊಟ್ಟಿದ್ದೇನೆ. ಇಲ್ಲವಾದ್ರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ತಿಳಿಸಿದರು.

ಬಸ್​ ತಂಗುದಾಣದ ಮೇಲೆ ಗುಂಬಜ್​​ ಇರುವುದು ಗಮನಿಸಿದ್ದು. ಅಂತಹ ಬಸ್​ ನಿಲ್ದಾಣದ ಗುಂಬಜ್ ತೆರವಿಗೆ ಹೇಳಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ3-4 ದಿನದಲ್ಲಿ ಗುಂಬಜ್​ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ಬಸ್ ನಿಲ್ದಾಣದ ಶೆಲ್ಟರ್

ಗುಂಬಜ್ ಮಾದರಿ ಬಸ್ ಶೆಲ್ಟರ್ ಒಡೆದು ಹಾಕುವ ಎಚ್ಚರಿಕೆ ನೀಡಿದ್ದ ಸಂಸದ ಪ್ರತಾಪಸಿಂಹ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಬಸ್ ಶೆಲ್ಟರ್ ಬದಲಾಗಿದೆ. ಇದೀಗ ಬಸ್ ಶೆಲ್ಟರ್ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ. ಶಾಸಕ ಎಸ್​ಎ ರಾಮದಾಸ್ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಸ್​ ನಿಲ್ದಾಣದ ಶೆಲ್ಟರ್​ನಲ್ಲಿ ಮೂರು ಗುಂಬಜ್‌ಗಳ ಮೇಲೆ ಕಳಸ ಮಾದರಿಯ ಆಕೃತಿ ನಿರ್ಮಾಣ ಮಾಡಲಾಗಿದೆ.

ನನ್ನ ಫೋನ್ ರಿಸೀವ್ ಮಾಡಲು ಜನ ಹೆದರುತ್ತಿದ್ದಾರೆ; ಇಡಿ ಸಮನ್ಸ್ ಬಗ್ಗೆ ಡಿ,ಕೆ.ಶಿವಕುಮಾರ್ ಬೇಸರ

https://pragati.taskdun.com/politics/d-k-shivakumared-summoncereaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button