ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯಾದ್ಯಂತ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಲಾಕ್ ಡೌನ್ ಘೋಷಿಸಲಾಗಿದೆ. ಆದರೆ ರಾಜ್ಯ ಸರ್ಕಾರ ದಿನಕ್ಕೊಂದು ಆದೇಶ ಹೊರಡಿಸುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ವಿಪಕ್ಷದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ನಿಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಹೆಚ್ ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್, ದಿನದ 24 ಗಂಟೆ ದಿನಸಿ ಅಂಗಡಿ ತೆಗೆಯುವ ವಿಚಾರವಾಗಿ ಇಷ್ಟಬಂದಂತೆ ಆದೇಶ ಹೊರಡಿಸಬಾರದು. ಕರ್ಪ್ಯೂ ಮ್ಯಾನ್ಯುಯಲ್ ಪಾಲಿಸಬೇಕು. ಸಿಎಂ ಯಡಿಯೂರಪ್ಪ ಹೊರತುಪಡಿಸಿ ಬೇರೆ ಯಾರು ಹೇಳಿಕೆಗಳನ್ನು ನೀಡಬಾರದು. ಯಡಿಯೂರಪ್ಪ ವಿಪಕ್ಷ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಾಲ ಕಾಲಕ್ಕೆ ಅವರಿಂದ ಸಲಹೆಗಳನ್ನು ಪಡೆಯಬೇಕು. ಇದು ಜಾಗತಿಕ ಮಹಾಮಾರಿ. ಇದರ ವಿರುದ್ದ ಸಂಘಟಿತ ಹೋರಾಟ ಅಗತ್ಯ ಎಂದು ಸಲಹೆ ನೀಡಿದರು.
ಅನಗತ್ಯವಾಗಿ ಯಾರೂ ಮೂಗು ತೂರಿಸಬಾರದು. ಆರೋಗ್ಯ ಸಚಿವರು ವೈದ್ಯಕೀಯ ಶಿಕ್ಷಣ ಸಚಿವರಿಬ್ಬರೇ ಸಾಕು. ಡಿಸಿಎಂ ಅಶ್ವಥ್ ನಾರಾಯಣ್ ಗಂಭೀರವಾದ ಸಭೆಯಲ್ಲಿ ಮಾಡಿದ ಆರೋಪ ಸರಿಯಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಆಗಬಾರದು. ನಮ್ಮ ಪೊಲೀಸರು ಈ ಪರಿಸ್ಥಿತಿಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ