ಕೊರೊನಾ ಭೀತಿ ಬೆನ್ನಲ್ಲೇ ಭೂ ಕಂಪದ ಅನುಭವ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಈಗಾಗಲೇ ಸಾಂಸ್ಕೃತಿಕ ನಗರಿ ಮೈಸೂರು ಕೊರೊನಾ ಸೋಂಕಿನಿಂದ ತತ್ತರಿಸಿದ್ದು, ಇದರ ಬೆನ್ನಲ್ಲೇ ಜಿಲ್ಲೆಯ ಹಲವೆಡೆ ಭೂ ಕಂಪನದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.

ಮೈಸೂರು ಹಾಗೂ ಹಾಸನ ಜಿಲ್ಲೆಯಲ್ಲಿಯ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಕೆ ಆರ್ ನಗರ, ಹಳೆ ಯೂರು, ಹೊಸವೂರು, ಚಿಂಚನಕಟ್ಟೆ, ದಿಡ್ಡಹಳ್ಳಿ, ಹುಣಸೂರು, ಪಿರಿಯಾಪಟ್ಟಣಗಳಲ್ಲಿ ಭೂಮಿಯೊಳಗಿಂದ ಭಯಂಕರ ಶ್ಯಬ್ಧ ಬಂದಂತಾಗಿ ಕೆಲ ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ.

ಆತಂಕಗೊಂಡ ಜನರು ಮನೆಯಿಂದ ಹೊರಬಂದಿದ್ದಾರೆ. ಅಡುಗೆ ಮನೆಯಲ್ಲಿನ ಪಾತ್ರೆಗಳು ಕೂಡ ಕೆಳಗೆ ಬಿದ್ದಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಹಾಸನದ ಕೆಲ ಗ್ರಾಮಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button