Karnataka NewsLatest

*ಮೈಸೂರು ದಸರಾ ಸಿದ್ಧತೆ ವೇಳೆಯೆ ನಾಡ ಬಾಂಬ್ ಸೇರಿದಂತೆ ಭಾರಿ ಸ್ಫೋಟಕ ಪತ್ತೆ*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲೇ ಮೈಸೂರಿನಲ್ಲಿ ಭಾರಿ ಸ್ಫೋಟಕ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತ ವ್ಯಕ್ತಿಗಳು ನೀಲಿ ಬಣ್ಣದ ಬ್ಯಾಗ್ ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ.

ಸ್ಫೋಟಕ ವಸ್ತುಗಳನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ, ಪೊಲೀಸ್ ಸಿಬ್ಬಂದಿ ಸ್ಫೋಟಕಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಫೋಟಕಗಳು ಹಾಗೂ ಒಂದು ನಾಡ ಬಾಂಬ್ ಆಕಾರದ ವಸ್ತು ಇರುವುದು ಪತ್ತೆಯಾಗಿದೆ. ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಹೊತ್ತಲ್ಲೇ ಸ್ಫೋಟಕ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

Home add -Advt

Related Articles

Back to top button