ಪ್ರಗತಿವಾಹಿನಿ ಸುದ್ದಿ; ಮೈಸೂರು : ಮೈಸೂರು ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಗೆ ನನ್ನ ಅಭ್ಯಂತರವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ವಿಚಾರವಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ನನ್ನ ವಿರೋಧವಿಲ್ಲ. ಆದರೆ ಹಳೆಯ ಒಪ್ಪಂದದ ಪ್ರಕಾರ ನಮಗೆ ಮೇಯರ್ ಸ್ಥಾನ ನೀಡಬೇಕು ಎಂದಿದ್ದೇನೆ. ಯಾವುದೇ ಭಿನ್ನಾಭಿಪ್ರಾಯ, ಅಸಮಾಧಾನವಿಲ್ಲದೇ ಒಗ್ಗಟ್ಟಿನಿಂದ ಕೆಲಸಮಾಡಬೇಕು ಎಂದು ತಿಳಿಸಿದ್ದೇನೆ ಎಂದರು.
ಒಟ್ಟಾರೆ ಮೈಸೂರು ಪಾಲಿಕೆ ಅಧಿಕಾರ ಹಿಡಿಯಲು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ರಣತಂತ್ರ ಹೆಣೆದಿದೆ. ಜೆಡಿಎಸ್ ಜೊತೆ ಮೈತ್ರಿಗೂ ಸಿದ್ಧ ಎಂದಿದೆ. ಈ ನಡುವೆ ಬಿಜೆಪಿ ಕೂಡ ಮೇಯರ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡಲಿದೆಯೇ ಅಥವಾ ಕಾಂಗ್ರೆಸ್ ಜೊತೆ ಕೈ ಜೋಡಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ