Latest

ಪಾಲಿಕೆ ಚುನಾವಣೆ; ಜೆಡಿಎಸ್ ಜೊತೆ ಮೈತ್ರಿಗೆ ಸಿದ್ಧ ಆದ್ರೆ ಷರತ್ತುಗಳು ಅನ್ವಯ ಎಂದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಮೈಸೂರು : ಮೈಸೂರು ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಗೆ ನನ್ನ ಅಭ್ಯಂತರವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್ ನಡೆ ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ವಿಚಾರವಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ನನ್ನ ವಿರೋಧವಿಲ್ಲ. ಆದರೆ ಹಳೆಯ ಒಪ್ಪಂದದ ಪ್ರಕಾರ ನಮಗೆ ಮೇಯರ್ ಸ್ಥಾನ ನೀಡಬೇಕು ಎಂದಿದ್ದೇನೆ. ಯಾವುದೇ ಭಿನ್ನಾಭಿಪ್ರಾಯ, ಅಸಮಾಧಾನವಿಲ್ಲದೇ ಒಗ್ಗಟ್ಟಿನಿಂದ ಕೆಲಸಮಾಡಬೇಕು ಎಂದು ತಿಳಿಸಿದ್ದೇನೆ ಎಂದರು.

Home add -Advt

ಒಟ್ಟಾರೆ ಮೈಸೂರು ಪಾಲಿಕೆ ಅಧಿಕಾರ ಹಿಡಿಯಲು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ರಣತಂತ್ರ ಹೆಣೆದಿದೆ. ಜೆಡಿಎಸ್​ ಜೊತೆ ಮೈತ್ರಿಗೂ ಸಿದ್ಧ ಎಂದಿದೆ. ಈ ನಡುವೆ ಬಿಜೆಪಿ ಕೂಡ ಮೇಯರ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡಲಿದೆಯೇ ಅಥವಾ ಕಾಂಗ್ರೆಸ್ ಜೊತೆ ಕೈ ಜೋಡಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Related Articles

Back to top button