Latest

ಪೊಲೀಸ್ ಜೀಪ್ ಅಪಘಾತ; ಇಬ್ಬರು ಅಧಿಕಾರಿಗಳ ದುರಂತ ಅಂತ್ಯ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಗಸ್ತಿನಲ್ಲಿದ್ದ ಪೊಲೀಸ್ ಜೀಪ್ ಮರಕ್ಕೆ ಡಿಕ್ಕಿಹೊಡೆದ ಪರಿಣಾಮ ಎಎಸ್ ಐ, ಹೆಡ್ ಕಾನ್ಸ್ ಟೇಬಲ್ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನ ಕೆ.ಆರ್.ನಗರ ಸಿದ್ದನಕೊಪ್ಪಲು ಗೇಟ್ ಬಳಿ ಸಂಭವಿಸಿದೆ.

ಎಎಸ್ ಐ ಮೂರ್ತಿ, ಹೆಚ್.ಸಿ ಶಾಂತಕುಮಾರ್ ಮೃತರು. ಸಾಲಿಗ್ರಾಮದಿಂದ ಕೆ.ಆರ್.ನಗರಕ್ಕೆ ಪ್ರಯಾಣಿಸುತ್ತಿದ್ದ ವೇಳೆ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ ಹೊಡೆದಿದೆ.

ಸ್ಥಳಕ್ಕೆ ಎಸ್.ಪಿ ರಿಷ್ಯಂತ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button