Wanted Tailor2
Cancer Hospital 2
Bottom Add. 3

*ನಿವೃತ್ತ ಪೊಲೀಸ್ ಅಧಿಕಾರಿ ಮನೆಯನ್ನೇ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ನಿವೃತ್ತ ಪೊಲೀಸ್ ಅಧಿಕಾರಿಯ ಮನೆಯನ್ನು ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

ಮೈಸೂರಿನ ಲಲಿತ್ ಮಹಲ್ ನಗರದ ಮುಖ್ಯರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆಯನ್ನು ಬಾಡಿಗೆ ಪಡೆದು ಫ್ಯಾಮಿಲಿ ಸಲೂನ್ ಎಂಬ ಹೆಸರಲ್ಲಿ ಮಹೇಶ್ ಎಂಬಾತ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಒಡನಾಡಿ ಸಂಸ್ಥೆ ಹಾಗೂ ಪೊಲೀಸ್ ಕಮಿಷನರ್ ವಿಶೇಷ ದಳ ಕಾರ್ಯಾಚರಣೆ ನಡೆಸಿ ದಂಧೆ ನಡೆಯುತ್ತಿದ್ದ ಬಗ್ಗೆ ಪತ್ತೆ ಮಾಡಿದೆ.

ಮಹೇಶ್ ಎಂಬಾತ ನಿವೃತ್ತ ಪೊಲೀಸ್ ಅಧಿಕಾರಿಗೆ ಸೇರಿದ್ದ ಕಟ್ಟಡವನ್ನು ಬಾಡಿಗೆ ಪಡೆದಿದ್ದ. ಹೊರಗಡೆ ನೋಡುವವರಿಗೆ ಫ್ಯಾಮಿಲಿ ಸಲೂನ್ ಎಂದು ಬೋರ್ಡ್ ಹಾಕಿದ್ದ. ಆದರೆ ಒಳಗಡೆ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು. ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣ ಪತ್ತೆ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Bottom Add3
Bottom Ad 2

You cannot copy content of this page