Kannada NewsKarnataka NewsLatest

*BREAKING: ಪಬ್ ನಲ್ಲಿ ಬೆಂಕಿ ಅವಘಡ: ಇಬ್ಬರು ಸಜೀವದಹನ; 7 ಜನರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಪಬ್ ವೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಸಜೀವದಹನವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ರಿಂಗ್ ರಸ್ತೆಯಲ್ಲಿನ ದಟ್ಟಗಳ್ಳಿಯಲ್ಲಿನ 4ನೇ ಹಂತದಲ್ಲಿರುವ ಪಬ್ ನಲ್ಲಿ ಈ ದುರಂತ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ. ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಸಾಹಿಲ್ ಹಾಗೂ ಪ್ರಕಾಶ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಪಬ್ ನ ಉದ್ಯೋಗಿಗಳು ಎಂದು ತಿಳಿದುಬಂದಿದೆ. ಬೆಂಕಿ ಅವಘಡದಿಂದಾಗಿ ಇಡೀ ಪಬ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button