ಪ್ರಗತಿವಾಹಿನಿ ಸುದ್ದಿ; ಮೈಸೂರು: ಕರೊನಾ ವೈರಸ್ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ’ದೀಪ ಬೆಳಗಿಸುವಂತೆ ಕರೆ ನೀಡಿದ್ದು, ಕ್ಯಾಂಡಲ್ ಅಥವಾ ದೀಪ ಹಚ್ಚಿದರೆ ವೈರಸ್ ದೀಪದ ಬಳಿ ಬರುತ್ತೆ. ಈ ವೇಳೆ ದೀಪದ ಶಾಖಕ್ಕೆ ವೈರಸ್ ಸಾಯುತ್ತೆ ಎಂದು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಮೋದಿಯವರ ದೀಪ ಬೆಳಗುವ ಕರೆಯ ಹಿಂದೆ ವೈಜ್ಞಾನಿಕ ಕಾರಣ ಇದೆ. ಅದಕ್ಕಾಗಿಯೇ ದೀಪ ಹಚ್ಚಲು ದೇಶಾದ್ಯಾಂತ ಕರೆ ನೀಡಿದ್ದಾರೆ ಎಂದರು.
ಕತ್ತಲಿನಲ್ಲಿ ದೀಪ ಹಚ್ಚಿದರೆ ವೈರಸ್ ಎಲ್ಲೆ ಇದ್ದರೂ ದೀಪದ ಬಳಿ ಬರುತ್ತೆ. ಆಗ ದೀಪದ ಶಾಖಕ್ಕೆ ವೈರಸ್ ಸಾಯುತ್ತೆ. ನಮ್ಮ ಮನೆಯ ಒಳಗೆ ವೈರಸ್ ಇರಬಾರದು ಎಂದು ಈ ಚಿಂತನೆ ಮಾಡಿದ್ದಾರೆ. ಹಾಗಾಗಿ ನಾಳೆ ರಾತ್ರಿ ಎಲ್ಲರೂ ದೀಪ ಹಚ್ಚಿ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿ ಎಂದು ಮನವಿ ಮಾಡಿದರು.
ಮೈಸೂರಿನ ಎಂಜಿ ಮಾರುಕಟ್ಟೆಯಲ್ಲಿ ಶಾಸಕರು ಕ್ಯಾಂಡಲ್, ಮಾಸ್ಕ್ ಹಾಗೂ ದೀಪ ವಿತರಣೆ ಮಾಡಿದರು. ಈ ವೇಳೆ ಜನ ಮಾಸ್ಕ್ ಪಡೆಯಲು ಮುಗಿಬಿದ್ದಿದ್ದು, ತಕ್ಷಣ ಪೊಲೀಸರು ದೌಡಾಯಿಸಿ ಜನರು ಗುಂಪು ಚದುರಿಸಿದ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ