
ಪ್ರಗತಿವಾಹಿನಿ ಸುದ್ದಿ; ಮೈಸೂರು: ಸರ್ಕಾರಿ ಶಾಲಾ ಶಿಕ್ಷಕನೊಬ್ಬ ಹಳೇ ವಿದ್ಯಾರ್ಥಿನಿ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ನಿಜಬಣ್ಣ ಬಯಲಾಗುತ್ತಿದ್ದತೆಯೇ ಕಾಮುಕ ಶಿಕ್ಷಕ ನಾಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
ಮೈಸೂರಿನ ನಂಜನಗೂಡು ತಾಲೂಕಿನ ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕ 58 ವರ್ಷದ ಸಿದ್ದರಾಜು ತನ್ನ ಹಳೆ ವಿದ್ಯಾರ್ಥಿನಿ 20 ವರ್ಷದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಆತನ ರಾಸಲೀಲೆಯ ಫೋಟೋ ವೈರಲ್ ಆಗಿದೆ. ಶಿಕ್ಷಕನ ವಿರುದ್ಧ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಆರೋಪಿ ಶಿಕ್ಷಕ ಸಿದ್ದರಾಜು ಮಾಜಿ ಸಚಿವ ಡಿ.ಟಿ. ಜಯಕುಮಾರ್ ಅವರ ಆಪ್ತ ಸಹಾಯಕನಾಗಿದ್ದ. ಇಬ್ಬರು ಹೆಂಡತಿಯನ್ನು ಹೊಂದಿರುವ ಸಿದ್ದರಾಜು ಧನುರ್ವಾಯು ರೋಗದಿಂದ ಎರಡೂ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದಾನೆ. ಆದರೂ ಯುವತಿಯೊಂದಿಗೆ ಕಾಮದಾಟ ಆಡುತ್ತಿದ್ದ. ಸಿದ್ದರಾಜು ಸುಮಾರು 25 ವರ್ಷಗಳಿಂದ ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕನಾಗಿದ್ದಾನೆ.
ಈ ನಡುವೆ ಸಿದ್ದರಾಜು ವರ್ತನೆಯಿಂದ ಬೇಸತ್ತಿರುವ ಗ್ರಾಮಸ್ಥರು ಆತನನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರಿಗೆ ಸಿಕ್ಕಿ ಬೀಳುವ ಭಯದಲ್ಲಿ ಸಿದ್ದರಾಜು ಗ್ರಾಮದಿಂದ ಪರಾರಿಯಾಗಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ