ವಿದ್ಯಾರ್ಥಿನಿ ಜತೆ ಸರಸವಾಡಿದ್ದ ಶಿಕ್ಷಕ ಅಮಾನತು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಹಳೆಯ ವಿದ್ಯಾರ್ಥಿನಿಯೊಂದಿಗೆ ಸರ್ಕಾರಿ ಶಾಲಾ ಶಿಕ್ಷಕನ ಕಾಮದಾಟ ಬಯಲಾದ ಹಿನ್ನೆಲೆಯಲ್ಲಿ ಶಿಕ್ಷಕ ಸಿದ್ದರಾಜುನನ್ನು ಸೇವೆಯಿಂದ ಅಮಾನತು ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿದ್ದರಾಜು ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಈತ ಹಳೆ ವಿದ್ಯಾರ್ಥಿನಿಯೊಂದಿಗಿದ್ದ ಖಾಸಗಿ ಕ್ಷಣದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಅಲ್ಲದೇ ಶಿಕ್ಷಕ ಸಿದ್ದರಾಜು ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡಿರುವುದು ಹಾಗೂ ವಿದ್ಯಾರ್ಥಿಗಳಿಂದ ತನ್ನ ವೈಯಕ್ತಿಕ ಕೆಲಸಗಳನ್ನು ಮಾಡಿಸಿಕೊಂಡಿರುವ ಸಂಗತಿ ಹಾಗೂ ಮಹಿಳಾ ಶಿಕ್ಷಕರಿಗೆ ಮಾನಸಿಕ ಕಿರುಕುಳ ಸೇರಿದಂತೆ ಹಲವಾರು ವಿಚಾರಗಳು ಬೆಳಕಿಗೆ ಬಂದಿತ್ತು.

ಶಿಕ್ಷಕ ಸಿದ್ದರಾಜುನನ್ನು ಅಮಾನತು ಮಾಡುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದರಾಜುನನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button