Kannada NewsLatest

*ಪ್ರವಾಸ ಹೋಗಲು ಪತಿ ಬೇಡ ಎಂದಿದ್ದಕ್ಕೆ ನೊಂದ ಪತ್ನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆ ಹೋಗಲು ಗಂಡ ಅನುಮತಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Home add -Advt

ಮೈಸೂರಿನ ಸರಸ್ವತಿಪುರಂ ನಿವಾಸಿ 46 ವರ್ಷದ ಸಂಧ್ಯಾ ಮೃತ ಮಹಿಳೆ. ಮನೆಯ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮೂಲದ ಸಂಧ್ಯಾ 25 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ರಂಗನಾಥ ಎಂಬವರನ್ನು ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಗಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಮಗ ಸಂಧ್ಯಾ ಹಾಗೂ ಪತಿಯ ಜೊತೆ ಮೈಸೂರಿನಲ್ಲಿಯೇ ವಾಸವಾಗಿದ್ದ.

ಪ್ರವಾಸದ ವಿಚಾರವಾಗಿ ಪತಿ-ಪತ್ನಿ ನಡುವೆ ಜಗಳವಾಗಿದೆ. ಪ್ರವಾಸಕ್ಕೆ ಹೋಗುವುದಾಗಿ ಪತ್ನಿ ಕೇಳಿದ್ದಾಳೆ. ಇದಕ್ಕೆ ಪತಿ ಬೇಡ ಎಂದಿದ್ದಾನೆ. ಇದೇ ವಿಚಾರವಾಗಿ ನೊಂದಿದ್ದ ಪತ್ನಿ ಸಂಧ್ಯಾ, ಪತಿ ಮನೆಯಿಂದ ಹೊರ ಹೋಗುತ್ತಿದ್ದಂತೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಧ್ಯಾ ಪೋಷಕರು, ಪತಿಯೇ ಸಂಧ್ಯಾಳನ್ನು ಕೊಲೆಗೈದು ಬಳಿಕ ಮನೆಯಿಂದ ಹೊರ ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ.


Related Articles

Back to top button