Vikalachetanara Day
Cancer Hospital 2
Bottom Add. 3

*ಪೊಲೀಸರ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಕಿರಣ್ ಕುಮಾರ್ (23) ಮೃತ ದುರ್ದೈವಿ. ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವಕ ಕೊನೆಯುಸಿರೆಳೆದಿದ್ದಾನೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದ ಯುವಕ ಕಿರಣ್ ಕುಮಾರ್ ನನ್ನು ಯಾವುದೋ ಗಲಾಟೆ ವಿಚರವಾಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದರಿಂದ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮೆನೆಗೆ ಬಂದವನು ನಿನ್ನೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಆತನನ್ನು ರಕ್ಷಿಸಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. ಆಸ್ಪತ್ರೆಗೆ ನಂಜನಗೂಡು ಡಿವೈ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Bottom Add3
Bottom Ad 2

You cannot copy content of this page