Latest

ಐಟಿ ದಾಳಿ ಪ್ರಕರಣ; 40 ಕೆ.ಜಿ ಚಿನ್ನ ಜಪ್ತಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳ ಮೆಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಂಗಳೂರಿನ ಆಸ್ಪತ್ರೆಯೊಂದರ ಮಾಲೀಕರ ಮನೆಯಲ್ಲಿ ಬ್ಬರೋಬ್ಬರಿ 40 ಕೆ.ಜಿ ಚಿನ್ನ, ವಜ್ರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳು ರಾಜ್ಯದ ವಿವಿಧ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದು, ಇನ್ನೂ ಕೂಡ ಶೋಧ ಮುಂದುವರೆದಿದೆ. ಈ ನಡುವೆ ಮಂಗಳೂರಿನ ಎ.ಜೆ ಆಸ್ಪತ್ರೆ, ಯನಮರಸ್ ಆಸ್ಪತ್ರೆ, ಬೆಂಗಳೂರಿನ ಬಿಜಿಎಸ್, ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜು ಸೇರಿದಂತೆ ಪ್ರತಿಷ್ಠಿತ ಮೆಡ್ಇಕಲ್ ಕಾಲೇಜಿನ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಅಪಾರ ಪ್ರಮಾಣದ ಸಂಪತ್ತನ್ನು ವಶಕ್ಕೆ ಪಡೆದಿದ್ದಾರೆ.

Related Articles

Back to top button