Belagavi NewsBelgaum NewsKannada NewsKarnataka NewsPolitics

*ಕೃಷ್ಣಮೃಗಗಳ ನಿಗೂಢ ಸಾವು: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಚನ್ನಮ್ಮ ಕಿರುಮೃಗಾಲಯದಲ್ಲಿ ಒಟ್ಟು 31 ಕೃಷ್ಣಮೃಗಗಳು ನಿಗೂಢವಾಗಿ ಸಾನಪ್ಪಿರುವ ಕುರಿತು ಪರಿಶೀಲನೆ ನಡೆಸುವಂತೆ ಅರಣ್ಯ ಇಲಾಖೆ ಡಿಎಫ್‌ಒ ಆ‌ರ್ ಎಫ್ ಓಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.

ಕುವೆಂಪು ನಗರದಲ್ಲಿ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿದ ಸಚಿವರು, ರಾಣಿ ಚನ್ನಮ್ಮ ಕಿರುಮೃಗಾಲಯದಲ್ಲಿ ಒಟ್ಟು 31 ಕೃಷ್ಣ ಮೃಗಗಳು ಸಾವನ್ನಪ್ಪಿವೆ. ಇದಕ್ಕೆ ಕಾರಣ ಏನು ಎಂದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಕೇಳಿದರು.

ರಾಣಿ ಚನ್ನಮ್ಮ ಕಿರುಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ ಎಂದ ಸಚಿವರು, ಕೃಷ್ಣಮೃಗಗಳ ರಕ್ಷಣೆಗೆ ಮತ್ತು ಈ ನಿಗೂಢ ಸಾವುಗಳಿಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತಕ್ಷಣವೇ ಸಮಗ್ರ ತನಿಖೆ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.

ಪ್ರಾಥಮಿಕ ವರದಿ ಪ್ರಕಾರ ಸೋಂಕು ಹರಡುವಿಕೆಯಿಂದ ಸಾವು ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸಿಬ್ಬಂದಿಯ ನಿರ್ಲಕ್ಷ್ಯ ಸಂಬಂಧಿಸಿದಂತೆ ಬಂದಿರುವ ಆರೋಪಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.

Home add -Advt

31 ಕೃಷ್ಣಮೃಗಗಳು ಸಾವನ್ನಪ್ಪಿರುವ ಪ್ರಕರಣ ಕುರಿತು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಉಳಿದಿರುವ ಕೃಷ್ಣಮೃಗಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮಗಳನ್ನು ತಕ್ಷಣ ಜಾರಿಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಈ ವೇಳೆ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ, ಡಿಎಪ್‌ಓ, ಆರ್‌ಎಪ್‌ಓ ಹಾಗೂ ಇತರ ಅಧಿಕಾರಿಗಳು ಇದ್ದರು.

Related Articles

Back to top button