Kannada NewsKarnataka NewsLatest
*ಮೈಸೂರು ದಸರಾ ಮಹೋತ್ಸವ*: *ಚಾಮುಂಡಿ ಬೆಟ್ಟದಿಂದ ಅರಮನೆಗೆ ಹೊರಟ ಉತ್ಸವ ಮೂರ್ತಿ ಮೆರವಣಿಗೆ*: *ಜಂಬೂಸವಾರಿಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಚಾಮುಂಡಿ ಬೆಟ್ಟದಿಂದ ಮೈಸೂರು ಅರಮನೆಗೆ ಚಾಮುಂಡೇಶ್ವರಿ ಉತ್ಸವಮೂರ್ತಿಯ ಅದ್ಧೂರಿ ಮೆರವಣಿಗೆ ಆರಂಭಗೊಂಡಿದೆ.
ಇಂದು ಜಂಬೂಸವಾರಿ ನಡೆಯಲಿದ್ದು, ಚಾಮುಂಡೇಶ್ವರಿ ತಾಯಿಯ 750 ಕೆಜಿ ತೂಕದ ಚಿನ್ನದ ಅಂಬಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಚಾಮುಂಡಿ ತಾಯಿ ಉತ್ಸವ ಮೂರ್ತಿ ಅರಮನೆಯತ್ತ ಸಾಗಿದೆ. ಈ ಮಹತ್ವದ ಮೆರವಣಿಗೆಯು ವಿಶೇಷವಾಗಿ ಸಿದ್ಧಪಡಿಸಿದ ವಾಹನದ ಮೂಲಕ ಸಾಗುತ್ತಿದೆ.
ಪ್ರತಿ ವರ್ಷದಂತೆ, ಈ ವರ್ಷವೂ ಸಹ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಉತ್ಸವಮೂರ್ತಿ ಮೆರವಣಿಗೆಯನ್ನು ಲಕ್ಷಾಂತರ ಭಕ್ತಾದಿಗಳು ಮತ್ತು ಪ್ರವಾಸಿಗರು ವೀಕ್ಷಿಸಲು ಕಾತುರರಾಗಿದ್ದಾರೆ. ಚಾಮುಂಡಿ ಬೆಟ್ಟದಿಂದ ಅರಮನೆಯವರೆಗಿನ ಈ ಪಯಣವು ಸಾಂಪ್ರದಾಯಿಕ ವೈಭವದಿಂದ ಕೂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




