ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೈಸೂರಿನಲ್ಲಿ ಕೊರೋನಾ ಸೋಂಕಿನ ಮೊದಲ ಪ್ರಕರಣವಾಗಿದ್ದ ವ್ಯಕ್ತಿ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದುಬೈನಿಂದ ಬಂದಿದ್ದ P 20 ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಅವರಿಗೆ ಮೈಸೂರಿನ ಕೋವಿಡ್-19 ಆಸ್ಪತ್ರೆಯಲ್ಲಿ ಕಳೆದ 18 ದಿನಗಳಿಂದ ಚಿಕಿತ್ಸೆ ನೀಡಲಾಗಿತ್ತು. ಇದೀಗ ವ್ಯಕ್ತಿ ಗುಣಮುಖರಾಗಿದ್ದು, ಡಿಸ್ಚಾರ್ಜ್ ಆಗಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಮಾಹಿತಿ ನೀಡಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಒಟ್ಟು 3057 ಕೊರೋನಾ ನಿಗಾ ಪ್ರಕರಣಗಳಿದ್ದು, 287 ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 174 ನೆಗೆಟಿವ್ ಬಂದಿವೆ. 35 ಪ್ರಕರಣಗಳು ಪಾಸಿಟಿವ್ ಬಂದಿವೆ. ಇನ್ನೂ 70 ಪ್ರಕರಣಗಳ ವರದಿ ಬರಬೇಕಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ 34 ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದೇಶದಿಂದ ಬಂದು ಮನೆಯಲ್ಲೇ 1533 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 1490 ಮಂದಿ 14 ದಿನಗಳ ಕಾಲ ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ