Kannada NewsKarnataka NewsPolitics
*ನಂದಿಧ್ವಜ ಪೂಜೆ ವೇಳೆ ಮಂತ್ರಿಗಳಿಗೆ ಅವಕಾಶ ನಿರಾಕರಣೆ ಪ್ರಕರಣ*: *ವಿಚಾರಣೆಗೆ ಸಿಎಂ ಆದೇಶ*: *ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ*

ಪ್ರಗತಿವಾಹಿನಿ ಸುದ್ದಿ: ಮಂತ್ರಿಗಳನ್ನೇ ನಿರ್ಬಂಧಿಸುವ ಮೂಲಕ ಅಧಿಕಾರಿಗಳು ಉದ್ಧಟತನದಿಂದ ವರ್ತಿಸಿರುವುದು ಕಂಡು ಬಂದಿದೆ. ತಕ್ಷಣ ಖುದ್ದು ನಾನೇ ಮಧ್ಯಪ್ರವೇಶಿಸಿ ಮಂತ್ರಿಗಳ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದೇನೆ. ಆದರೂ ಅಧಿಕಾರಿಗಳ ಉಡಾಫೆ ಸಹಿಸಲು ಆಗುವುದಿಲ್ಲ. ಹೀಗಾಗಿ ಇದಕ್ಕೆ ಹೊಣೆಗಾರರು ಯಾರು ಎಂಬ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಅದೇಶಿಸಿದ್ದೇನೆ ಎಂದು ಸಿಎಂ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ ಬಂದ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಅವರು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




