
ಪ್ರಗತಿವಾಹಿನಿ ಸುದ್ದಿ, ಶಿರಸಿ – ಶಿರಸಿಯ ಪ್ರಸಿದ್ಧ ಅಡಿಕೆ ವ್ಯಾಪಾರಸ್ಥರಾಗಿದ್ದ ಎನ್.ಎನ್.ಹೆಗಡೆ ಹೂಡ್ಲಮನೆ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ ಸುಮಾರು 75 ವರ್ಷ ವಯಸ್ಸಾಗಿತ್ತು.
ಅಲ್ಪಕಾಲದ ಅನಾರೋಗ್ಯದಿಂದಾಗಿ ಅವರನ್ನು ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಅವರಿಗೆ ಪತ್ನಿ, 5 ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರ ಇದ್ದಾರೆ.
ಅವರ ಅಂತ್ಯಕ್ರಿಯೆ ಮಂಗಳವಾರ ಬೆಳಗ್ಗೆ ನಡೆಯಲಿದೆ.
6000 ಅಧಿಕಾರಿ, ಸಿಬ್ಬಂದಿಗೆ ಕೂಡಲೇ ಲಸಿಕೆ ನೀಡಲು ನಿರ್ದೇಶನ