ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಪರೇಷನ್ ಕಮಲದ ಪ್ರಮುಖ ರೂವಾರಿ ಯಡಿಯೂರಪ್ಪನವರ ಆಪ್ತ, ಎನ್ ಆರ್ ಸಂತೋಷ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದದಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ಎನ್ ಆರ್ ಸಂತೋಷ್ ಅವರನ್ನು ನೇಮಿಸುವಂತೆ ಸೂಚಿಸಲಾಗಿದೆ.
ಎನ್ ಆರ್ ಸಂತೋಷ್ ಸಿಎಂ ಯಡಿಯೂರಪ್ಪನವರ ಆಪ್ತರಾಗಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬಿಳಿಸುವಲ್ಲಿ ಹಾಗೂ ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಈಗಾಗಲೇ ಸಿಎಂ ಯಡಿಯೂರಪ್ಪನವರಿಗೆ ಶಾಸಕರಾದ ಎಸ್.ಆರ್.ವಿಶ್ವನಾಥ್, ಎಂ.ಪಿ. ರೇಣುಕಾಚಾರ್ಯ ಮತ್ತು ಶಂಕರ ಗೌಡ ಪಾಟೀಲ್ ಈ ಮೂವರು ರಾಜಕೀಯ ಕಾರ್ಯದರ್ಶಿಗಳಿದ್ದಾರೆ. ಇದೀಗ 4ನೇ ರಾಜಕೀಯ ಕಾರ್ಯದರ್ಶಿಯಾಗಿ ಎನ್.ಆರ್.ಸಂತೋಷ್ ಅವರನ್ನು ದಿಢೀರ್ ಆಗಿ ನೇಮಕ ಮಾಡಲಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ