Latest

*ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ಎನ್.ವೈ ಗೋಪಾಲಕೃಷ್ಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಎರಡು ದಿನಗಳ ಹಿಂದೆ ಬಿಜೆಪಿಗೆ ಗುಡ್ ಬೈ ಹೇಳಿದ್ದ ಕೂಡ್ಲಿಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಎನ್ ವೈ ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎರದು ದಿನದ ಹಿಂದೆ ಗೋಪಾಲಕೃಷ್ಣ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

Home add -Advt

ಎಂಎಲ್ಸಿಗಳಾದ ಪ್ರಕಾಶ್ ರಾಥೋಡ್, ದಿನೇಶ್ ಗೂಳಿಗೌಡ, ಮಾಜಿ ಮೇಯರ್ ಜೆ ಹುಚ್ಚಪ್ಪ ಮತ್ತಿತರರು ಉಪಸ್ಥಿತರಿದ್ದರು.

https://pragati.taskdun.com/shashibhushan-hegde-joins-bjp/

Related Articles

Back to top button