*ನಾಡಬಾಂಬ್ ಸ್ಫೋಟ: ಯುವಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ನಾಡಬಾಂಬ್ ಸ್ಫೋಟಗೊಂಡು ಯುವಕ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ದನಲ್ಲಾಳ ಗ್ರಾಮದಲ್ಲಿ ನಡೆದಿದೆ. 19 ವರ್ಷದ ಪವನ್ ಮೃತ ಯುವಕ. ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡಿದೆ. ಮನೆಯ ಮೇಲ್ಛಾವಣಿ ಛಿದ್ರವಾಗಿದೆ. ಘಟನೆಯಲ್ಲಿ ಯುವಕ ಸಾವನ್ನಪ್ಪಿದ್ದು, ಆತನ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಓಮಾನ್ ನಲ್ಲಿ ಭೀಕರ ಅಪಘಾತ: ಬೆಳಗಾವಿಯ ಒಂದೇ ಕುಟುಂಬದ ನಾಲ್ವರು ಸಜೀವದಹನ* … Continue reading *ನಾಡಬಾಂಬ್ ಸ್ಫೋಟ: ಯುವಕ ದುರ್ಮರಣ*