*ರಾಜ್ಯ ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ; ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ?*

ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ವಸತಿ ಶಾಲೆ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧ ಹೇರಿ ವಿವಾದದ ಬಳಿಕ ಆದೇಶ ಹಿಂಪಡೆದಿದ್ದ ಸರ್ಕಾರ ಇದೀಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಕಡ್ಡಾಯವಲ್ಲ ಎಂಬರ್ಥದಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ಈ ನಡೆಗೆ ಭಾರಿ ವಿರೋಧ ವ್ಯಕ್ತವಾಗಿತ್ತಿದೆ.
ಸರ್ಕಾರಿ ಶಾಲೆಗಳಲ್ಲಿ, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕಳು ಆರಂಭವಾಗುವ ಮುನ್ನ ಹಾಗೂ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಆರಂಭದಲ್ಲಿ ನಾಡಗೀತೆ ಹಾಡಬೇಕು ಎಂದು ಸುತ್ತೋಲೆಯಲ್ಲಿ ಹೊರಡಿಸಲಾಗಿದೆ. ಆದರೆ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡಬಾರದು ಎಂಬ ಬಗ್ಗೆ ನೇರ ಉಲ್ಲೇಖವಿಲ್ಲ ಆದರೆ ಅದೇ ಅರ್ಥ ಬರುವಂತೆ ಸುತ್ತೋಲೆ ಹೊರಡಿಸಿರುವುದು ಚರ್ಚೆಗೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ