*ಮೆದುಳು ತಿನ್ನುವ ಅಪಾಯಕಾರಿ ಅಮೀಬಾಗೆ ಕೇರಳದಲ್ಲಿ ನಾಲ್ವರು ಮಕ್ಕಳು ಸಾವು: ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚುತ್ತಿದ್ದು, ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ.
ಅಪರೂಪದ ಹಾಗೂ ಅಪಾಯಕಾರಿಯಾಗಿರುವ ನಲ್ಗೇರಿಯಾ ಫೌಲೇರಿ ಎಂಬ ಅಮೀಬಾ ಸೂಕ್ಷ್ಮಾಣು ಜೀವಿಯಾಗಿದ್ದು, ಪಕ್ಕದ ರಾಜ್ಯ ಕೇರಳದಲ್ಲಿ ಈ ಸೋಂಕಿನಿಂದ ನಾಲ್ವರು ಮಕ್ಕಳು ಬಲಿಯಾಗಿದ್ದಾರೆ. ಮೆದುಳು ತಿನ್ನುವ ಈ ಅಮೀಬಾ ಸೋಂಕು ರಾಜ್ಯದ ಜನತೆಯನ್ನು ತಲ್ಲಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಈಗಗಲೇ ಡೆಂಗ್ಯೂ ಅಬ್ಬರ ಹೆಚ್ಚಿದ್ದು, ಝೀಕಾ, ಇಲಿ ಜ್ವರದ ಸೋಂಕು ಕೂದ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ದಕ್ಷಿಣ ಕನ್ನಡ ಅಧಿಕಾರಿಗಳಿಗೆ ಮೆದುಳು ತಿನ್ನುವ ಅಮೀಬಾ ರೋಗ ಲಕ್ಷಣ ಕಂಡುಬಂದಲ್ಲಿ ತಕ್ಷಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಅಲ್ಲದೇ ಜಿಲ್ಲೆಯಲ್ಲಿ ಮಳೆ ನೀರು ನಿಂತಿರುವ ಹೊಂಡಗಳಲ್ಲಿ, ಕಲುಷಿತ ನೀರಿನಲ್ಲಿ ಈಜಾಡದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಅಮೀಬಾ ಸೋಂಕು ನೀರಿನ ಮೂಲಕ ಮೂಗಿಗೆ ಸೇರಿ ಬಳಿಕ ನಮ್ಮ ಶರೀರ ಸೇರುತ್ತದೆ. ಮೆದುಳಿನ ಅಂಗಾಂಗಕ್ಕೆ ಭಾರಿ ಹಾನಿಯುಂಟುಮಾಡುತ್ತದೆ. ಕೇರಳದಲ್ಲಿ ಕಲುಷಿತ ನೀರಿನಲ್ಲಿ ಈಜಾಡಿದವರಲ್ಲಿ ಈ ಸೋಂಕು ಹೆಚ್ಚು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರಕ್ಕೆ ಆರೋಗ್ಯ ಇಲಾಖೆ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ