Belagavi NewsBelgaum NewsKannada NewsKarnataka NewsNationalPolitics

*ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ 2023 ರಿಂದ ಇಲ್ಲಿಯವರೆಗೆ ಒಟ್ಟು 90 ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ ನಡೆದಿದೆ. ಇನ್ನೂ ಹಲವಾರು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಾರದೆ ಇರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಹೇಳಿದರು.

ಇಂದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ಭಯ ಘಟಕದಲ್ಲಿ ದಾಖಲಾದ ಸಂಖ್ಯೆಗಳು 90 ಇವೆ. ಇನ್ನೂ ಕೆಲ ಪ್ರಕರಣಗಳು ಬೆಳಕಿಗೆ ಬಾರದೆ ಇರಬಹುದು. ಅವುಗಳ ಕುರಿತು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದರು.

ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಜೀವಂತ ಇರುವ ವಿಷಯ ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ನಾನು ಸವದತ್ತಿಯಲ್ಲಿ ದೇವದಾಸಿಯರನ್ನು ಭೇಟಿಯಾಗಿ ಅವರ ಜೊತೆಗೆ ಚರ್ಚಿಸಿದ್ದೇನೆ.‌ ಅವರಿಗೆ ಕಾನೂನು ಅವರಿವು ಮೂಡಿಸುವ ಅಗತ್ಯ ಇದ್ದು, ಸಂಬಂಧಿಸಿದ ಇಲಾಖೆಯವರಿಗೆ ಸೂಚನೆ ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡಲಾಗುವುದು ಎಂದರು.

ಬೈಲಹೊಂಗಲ ಹಾಗೂ ಸವದತ್ತಿ ತಾಲೂಕಾ ಆಸ್ಪತ್ರೆ ಶುಚಿಯಾಗಿವೆ.‌ ಸರಕಾರದ ಆರೋಗ್ಯದ ಸೌಲಭ್ಯವನ್ನು ಜನರು ಪಡೆದುಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಅಂಗನವಾಡಿಗಳಲ್ಲಿ ಶಿಕ್ಷಕಿಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಕೊಡಬೇಕೆಂದು ಸೂಚನೆ‌ ನೀಡಿದ್ದೇನೆ ಎಂದರು. ಜಿಲ್ಲೆಯ ಎಲ್ಲಾ ತಾಲೂಕಿಗೆ ಭೇಟಿ ನೀಡಲಿದ್ದೇನೆ. ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button