
ಪ್ರಗತಿವಾಹಿನಿ ಸುದ್ದಿ: ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ (80)ಅವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.
ಆಗಸ್ಟ್ 8 ರಂದು, ಗಣೇಶನ್ ಅವರು, ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಕುಸಿದು ಬಿದ್ದಿರುವ ಪರಿಣಾಮ ತಲೆಗೆ ಗಂಭೀರ ಗಾಯವಾಗಿತ್ತು. ಹಾಗಾಗಿ ಅವರು ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ನಾಗಾಲ್ಯಾಂಡ್‌ನ ಉಪಮುಖ್ಯಮಂತ್ರಿ ಯಂತುಂಗೊ ಪ್ಯಾಟನ್ ಅವರು ಗಣೇಶನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಗಣೇಶನ್ ಅವರ ನಿಧನದಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರ ಪ್ರಯಾಣದುದ್ದಕ್ಕೂ ಅವರು ಘನತೆ, ನಮ್ರತೆ ಮತ್ತು ಜನರ ಕಲ್ಯಾಣಕ್ಕಾಗಿ ಬದ್ಧತೆ ಇಟ್ಟುಕೊಂಡಿದ್ದರು ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.