*ನಾಗಮಂಗಲ ಪ್ರಕರಣ: ಇನ್ಸ್ ಪೆಕ್ಟರ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಇನ್ಸ್ ಪೆಕ್ಟರ್ ಅಮಾನತುಗೊಳಿಸಲಾಗಿದೆ. ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪದಡಿ ನಾಗಮಂಗಲ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಇನ್ಸ್ ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. *ಸಿಎಂ ಸಿದ್ದರಾಮಯ್ಯ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್* Home add -Advt