Politics

*ನಾಗಮಂಗಲ ಗಲಭೆ: ಎನ್ಐಎ ತನಿಖೆಗೆ ವಹಿಸುವಂತೆ ಆರ್.ಅಶೋಕ್ ಒತ್ತಾಯ*

ಪ್ರಗತಿವಾಹಿನಿ ಸುದ್ದಿ: ನಾಗಮಂಗಲ ಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ-ಎನ್ಐಎ ಗೆ ವಹಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ PFI, KFD ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ್ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ ಈ ನಿಟ್ಟಿನಲ್ಲಿ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಬೇಕು ಎಂದರು.

ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಸರ್ಕಾರ ದಾಖಲಿಸಿರುವ FIR ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ ಎಂದಿದ್ದಾರೆ.

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಒತ್ತಾಯಿಸುತ್ತೇನೆ ಎಂದು ಹೇಳಿದರು.

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಆಗ್ರಹಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button