
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ ಎಂದು ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.
ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ನಡೆಸಿದ್ದಾರೆ. ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸಿದ್ದಾರೆ. ನಾವು ನಾಗಮಂಗಲದಲ್ಲಿದ್ದೇವೆಯೋ ? ಪಾಕಿಸ್ತಾನದಲ್ಲೋ ? ಎಂದು ಪ್ರಶ್ನಿಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿದ್ದು, ಗಲಭೆಗೆ ತಿರುಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಕಿಡಿಗೇಡಿಗಳು ಸಿಕ್ಕ ಸಿಕ್ಕ ಅಂಗಡಿಗಳಿಗೆ, ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಘಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ