
ಪ್ರಗತಿವಾಹಿನಿ ಸುದ್ದಿ: ನಾಗಮಂಗಲದಲ್ಲಿ ನಡೆದ ಗಲಭೆ ಕೋಮುಗಲಭೆಯಾಗಿದ್ದು, ಒಂದು ಸಮುದಾಯದ ಪುಂಡರ ಉದ್ದೇಶಪೂರ್ವಕ ದಾಂಧಲೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್ ಬಾಂಬ್ ಎಸೆದು ಕೋಮುಗಲಭೆಗೆ ಪ್ರಚೋದನೆ ನೀಡಿದ ಮುಸ್ಲಿಮ್ ಗಲಭೆಕೋರರನ್ನು ಬಂಧಿಸುವುದನ್ನು ಬಿಟ್ಟು ಸಮಿತಿಯ ಸದಸ್ಯರನ್ನು ಬಂಧಿಸಿದ ಪೋಲೀಸರ ಕೃತ್ಯ ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.
ನಾಗಮಂಗಲ ಗಲಭೆ ವಿಚಾರವಾಗಿ ಕೊಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ