Politics

*ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು; ಸಿಎಂ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಸಿಎಂ ಸಿದರಾಮಯ್ಯ ತಿಳಿಸಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button