*ಕಾಂಗ್ರೆಸ್ ವಿರುದ್ಧ ತೀವ್ರಗೊಂಡ ಅಸಮಾಧಾನ; ಬಿಜೆಪಿಗೆ ಸೇರ್ಪಡೆಯಾದ ಡಿ.ಕೆ.ಶಿವಕುಮಾರ್ ಆಪ್ತ ನಾಗರಾಜ್ ಛಬ್ಬಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಮಾತ್ರ ಬಾಕಿಯಿದ್ದು, ಕಾಂಗ್ರೆಸ್ ಟಿಕೆಟ್ ವಂಚಿತರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಕಲಘಟಗಿ ಕ್ಷೇತ್ರದ ಕೈ ಟಿಕೆ ಆಕಾಂಕ್ಷಿಯಾಗಿದ್ದ ಮಾಜಿ ಎಮ್ ಎಲ್ ಸಿ, ಡಿ.ಕೆಶಿವಕುಮಾರ್ ಆಪ್ತ ನಾಗರಾಜ್ ಛಬ್ಬಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸಂತೋಷ್ ಲಾಡ್ ಅವರಿಗೆ ಕಲಘಟಗಿ ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ನಾಗರಾಜ್ ಛಬ್ಬಿ ಇಂದು ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Home add -Advt

ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ನಾಗರಾಜ್ ಛಬ್ಬಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಲಘಟಗಿ ಕ್ಷೇತ್ರದಿಂದ ಸಂತೋಷ್ ಲಾಡ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

https://pragati.taskdun.com/y-s-v-dattaindependent-candidatecongress/

Related Articles

Back to top button