GIT add 2024-1
Beereshwara 33

*ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ನಿಧನಕ್ಕೆ ಸಿಎಂ ಸಂತಾಪ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಸೇಡಂ ನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದುದನ್ನು ಮುಖ್ಯಮಂತ್ರಿಯವರು ಸ್ಮರಿಸಿದ್ದಾರೆ.

Emergency Service

ಪಾಟೀಲರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದವರು. ಅವರ ನಿಧನದಿಂದ ಒಬ್ಬ ಜನಾನುರಾಗಿ ಮುತ್ಸದ್ದಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಬಣ್ಣಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Laxmi Tai add
Bottom Add3
Bottom Ad 2