*ಕೋಗಿಲು ಬೆನ್ನಲ್ಲೇ ಮತ್ತೊಂದು ಒತ್ತುವರಿ ತೆರವು ಕಾರ್ಯಾಚರಣೆ: 30ಕ್ಕೂ ಹೆಚ್ಚು ಮನೆಗಳು ಧ್ವಂಸ*

ಪ್ರಗತಿವಾಹಿನಿ ಸುದ್ದಿ: ಕೋಗಿಲು ಲೇಔಟ್ ನಲ್ಲಿ ಅಕ್ರಮ ನಿವಾಸಿಗಳ ತೆರವು ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಮತ್ತೊಂದು ಒತ್ತುವರಿ ತೆರವು ಕೈಗೊಂಡಿದೆ.
ನಾಗವಾರವಳಿಯ ಸಾರಾಯಿಪಾಳ್ಯದಲ್ಲಿ ಬಿಡಿಎಗೆ ಸೇರಿದ ಭೂಮಿಯನ್ನು ಮರುಸ್ವಾಧೀನ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಜೆಸಿಬಿಗಳು ಕಾರ್ಯಾಚರಣೆ ನಡೆಸಿದ್ದು, 30ಕ್ಕೂ ಹೆಚ್ಚು ಶೆಡ್ ಗಳನ್ನು ಧ್ವಂಸಗೊಳಿಸಲಾಗಿದೆ.
ಈ ಭಾಗದಲ್ಲಿ ಒತ್ತುವರಿ ಮಾಡಿಕೊಂಡಿದ್ದ ಜನರು ಬೀದಿಪಾಲಾಗಿದ್ದಾರೆ. ಸಾರಾಯಿಪಾಳ್ಯದಲ್ಲಿ ಬಿಡಿಎಗೆ ಸೇರಿದ ಸರ್ವೆ ನಂ.28ರ 2 ಎಕರೆ ಜಾಗವನ್ನು ಮರುಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಜಾಗದಲ್ಲಿ 30ಕ್ಕೂ ಹೆಚ್ಚು ಮನೆಗಳು, ಶೆಡ್ ಗಳು, ಗ್ಯಾರೇಜ್ ಗಳು ಇದ್ದವು. ಅವುಗಖನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.
ತೆರವು ಕಾರ್ಯಾಚರಣೆಯ ವಿರುದ್ಧ ಸ್ಥಳೀಯ ನಿವಾಸಿಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 20 ವರ್ಷಗಳಿಂದ ಇಲ್ಲಿ ವಾಸವಾಗಿದ್ದೇವೆ. ಏಕಾಏಕಿ ಮನೆಗಳನ್ನು ತೆರವು ಮಾಡಿದತೆ ಎಲ್ಲಿಗೆ ಹೊಗಬೇಕು? ನಿರಾಶ್ರೀತರು ಅಗತ್ಯ ದಾಖಲೆಗಳನ್ನು ಹೊಂದಿದ್ದೇವೆ. ಆದರೂ ಹೇಳದೇ ಕೇಳದೇ ತೆರವು ಮಾಡಿರುವುದು ಸರಿಯಲ್ಲ ಎಂದು ಪ್ರತಿಭಟಿಸಿದ್ದಾರೆ.




