
ಪ್ರಗತಿವಾಹಿನಿ ಸುದ್ದಿ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಮಾಹಿತಿ ರವಾನಿಸಿದ್ದಾರೆ.ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ವಿಪಕ್ಷ್ಜ ಬಿಜೆಪಿ ನಾಯಕರು ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದನ್ನು ಖಂಡಿಸಿದ್ದರು. ಅಲ್ಲದೇ ರಾಜೀನಾಮೆಗೆ ಒತ್ತಾಯಿಸಿ ಸದನದ ಒಳಗೂ ಹೊರಗೂ ಭಾರಿ ಹೋರಾಟ ನಡೆಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.



