Latest

ಕಾಂಗ್ರೆಸ್ ನ 15-20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಕಾಂಗ್ರೆಸ್ ಹಾಗೂ ಜೆಡಿಎಸ್ ನ 15-20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನ 5 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ. ಆದರೆ 5ದಲ್ಲ ಕಾಂಗೆಸ್-ಜೆಡಿಎಸ್ ನ 15-20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ ನಮಗೆ ಈಗ ಅವಶ್ಯಕತೆಯಿಲ್ಲ ಚುನಾವಣೆ ಸಂದರ್ಭದಲ್ಲೂ ಅವರನ್ನು ಸೇರಿಸಿಕೊಳ್ಳಲ್ಲ ಎಂದರು.

Home add -Advt

ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶಿಸ್ತು ಸಮೀತಿ ನೋಟೀಸ್ ನೀಡಿದೆ. ಅದಕ್ಕೆ ಅವರು ಉತ್ತರಿಸಲಿದ್ದಾರೆ. ಯತ್ನಾಳ್ ಅವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅದಕ್ಕೆ ಸಂಬಂಧಪಟ್ಟವರು ಉತ್ತರ ನಿಡುತ್ತಾರೆ ಎಂದು ಹೇಳಿದರು.

Related Articles

Back to top button