ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗ್ಯಾರಂಟಿ ಯೋಜನೆ ವಿಳಂಬ ಖಂಡಿಸಿ ಬಿಜೆಪಿ ನಾಯಕರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸದನದ ಹೊರಗೂ, ಒಳಗೂ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದೆಡೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸದನದ ಒಳಗೆ ಪ್ರತಿಭಟನೆ ನಡೆಸಿದ್ದರೆ ಇನ್ನೊಂದೆಡೆ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಧರಣಿ ನಡೆಸಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ಗಳನ್ನು ಹಂಚಿ ರಾಜ್ಯದ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅಧಿಕಾರಕ್ಕೆ ಬರುವ ಮುನ್ನ 5 ಗ್ಯಾರಂಟಿ ಯೋಜನೆ ಜಾರಿಗೆ ತರುತ್ತೇವೆ ಎಂದು ಜನರಿಗೆ ಭರವಸೆ ಕೊಟ್ಟರು. ಈಗ ನೆಪಗಳನ್ನು ಹೇಳುತ್ತಾ ಯೋಜನೆ ಜಾರಿಗೆ ವಿಳಂಬ ಮಾಡುತ್ತಿದ್ದಾರೆ. ರಾಜ್ಯದ ಜನರಿಗೆ ಮೋಸ ಮಾಡುತ್ತಿದ್ದಾರೆ. ಇಂದು ಯಡಿಯೂರಪ್ಪ ನೇತೃತ್ವದಲ್ಲಿ ಇದು ಸಾಂಕೇತಿಕ ಪ್ರತಿಭಟನೆ. ಇನ್ಮುಂದೆ ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿ ಹೋರಾಟ ನಡೆಯಲಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ