Latest

ಬಾಲಕನ ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ ಉದ್ಯಮಿ ಪುತ್ರನನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಸುಖಾಂತ್ಯವಾಗಿದ್ದು, ಕಿಡ್ನ್ಯಾಪ್ ಆಗಿದ್ದ ಬಾಲಕನನ್ನು ಪೊಲೀಸರು ರಕ್ಷಿಸಿದ್ದಾರೆ.

ಬೆಂಗಳೂರಿನ ಭಾರತಿ ನಗರದಲ್ಲಿ ಈ ಘಟನೆ ನಡೆದಿದೆ. ಉದ್ಯಮಿಯ ಮಗ ಮನೆ ಮುಂದೆ ಆಟವಾಡುತ್ತಿದ್ದಾಗ ಕಿರಾತಕರು ಆತನನ್ನು ಕಿಡ್ನ್ಯಾಪ್​ ಮಾಡಿದ್ದರು. ಬಳಿಕ ಆತನ ಪೋಷಕರಿಗೆ ಕರೆ ಮಾಡಿ 2 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಮೊಹಮ್ಮದ್ ಸಾದಿಕ್ ಮತ್ತು ಉಸ್ಮಾ ದಂಪತಿಯ 11 ವರ್ಷದ ಪುತ್ರ ಕಿಡ್ನ್ಯಾಪ್ ಆಗಿದ್ದ ಹುಡುಗ. ಅಪಹರಣಕಾರರಿಂದ ಕರೆ ಬಂದ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

Home add -Advt

ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣದ ಬೆನ್ನತ್ತಿದ್ದರು. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಅಪಹರಣಕಾರರ ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಿದ್ದರು. ಪೂರ್ವ ವಿಭಾಗ ಡಿಸಿಪಿ ಡಾ.ಶರಣಪ್ಪ ನೇತೃತ್ವದಲ್ಲಿ ತುಮಕೂರು ಬಳಿ ಕಿಡ್ನ್ಯಾಪರ್ಸ್ ಪತ್ತೆಹಚ್ಚಿದ್ದು, ಬಾಲಕನನ್ನು ರಕ್ಷಿಸಿದ್ದಾರೆ.

ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button