ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರ್.ಎಸ್.ಎಸ್ ಗೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದ್ದು, ಭಾರತದಲ್ಲಿ ಆರ್.ಎಸ್.ಎಸ್ ಎಂಬ ವಿಚ್ಛಿದ್ರಕಾರಿ ಸಂಘಟನೆ ಈಗಾಗಲೇ ಮೂರು ಬಾರಿ ನಿಷೇಧಕ್ಕೊಳಪಟ್ಟಿತ್ತು. ಕಾಂಗ್ರೆಸ್ ಆಗಲು ಇತ್ತು, ಈಗಲು ಇದೆ ಮುಂದೆಯೂ ಇರಲಿದೆ ಎಂದು ಹೇಳಿದೆ.
ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂದು ಹೇಳಿದ್ದರು. ಸರ್ಕಾರಿ ಹಾಗೂ ಅನುದಾನಿತ ಶಾಲಾ ಆವರಣದಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಷಿಸಲಾಗುವುದು ಎಂದು ಟ್ವೀಟ್ ಮೂಲಕ ಗುಡುಗಿದೆ.
ಆರ್. ಎಸ್ ಎಸ್ ನಿಷೇಧದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರಭಕ್ತಿ ಕಲಿಸಿದೆ. ನೆಹರೂ, ಇಂದಿರಾ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡರು. ನಿಷೇಧದ ಕೆಲಸ ಮಾಡಿದಾಗ ದೇಶದಲ್ಲಿ ಕಾಂಗ್ರೆಸ್ ಬಂದಿಲ್ಲ. ಬಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರುವುದಿಲ್ಲ ಎಂದು ಕಿಡಿಕಾರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ