Latest

*ರಸ್ತೆಗುಂಡಿ, ಚರಂಡಿ ವಿಚಾರ ಬಿಟ್ಟು ಬಿಡಿ; ಲವ್ ಜಿಹಾದ್ ಬಗ್ಗೆ ಗಮನಕೊಡಿ; ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತ ಹಾಗೂ ವಿಪಕ್ಷ ನಾಯಕರು ಪರಸ್ಪರ ಟೀಕಿಸುವ ಬರದಲ್ಲಿ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

ರಸ್ತೆಗುಂಡಿ, ಚರಂಡಿ ಮುಚ್ಚುವ ವಿಚಾರಗಳನ್ನು ಬಿಟ್ಟುಬಿಡಿ, ಲವ್ ಜಿಹಾದ್ ಬಗ್ಗೆ ಗಮನಕೊಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ನಳೀನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ. ಮಂಗಳೂರಿನ ಬಿಜೆಪಿ ಬೂತ್ ವಿಜಯ ಅಭಿಯಾನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಚರಂಡಿ, ಮೋರಿ ಅಭಿವೃದ್ಧಿ ಇಂತಹ ಸಣ್ಣಪುಟ್ಟ ವಿಚಾರಗಳನ್ನು ಬಿಡಿ. ಲವ್ ಜಿಹಾದ್ ತಡೆ ಬಗ್ಗೆ ಗಮನಕೊಡಿ. ಲವ್ ಜಿಹಾದ್ ತಡೆಯಲು ಭಾರತೀಯ ಜನತಾ ಪಕ್ಷ ಬೇಕು. ಬಿಜೆಪಿಯಿಂದ ಮಾತ್ರ ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿಯಿಂದ ಮಾತ್ರ ಸಾಧ್ಯ ಈ ಬಗ್ಗೆ ಚರ್ಚೆ ನಡೆಯುವಂತೆ ಮಾಡಬೇಕು ಎಂದು ಹೇಳಿದ್ದಾರೆ.

Home add -Advt

ಲವ್ ಜಿಹಾದ್ ವಿರುದ್ಧ ಬಿಜೆಪಿ ಕಾನೂನು ಮಾಡುತ್ತದೆ. ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಿದ್ದರೆ ಲವ್ ಜಿಹಾದ್ ನಿಲ್ಲಿಸಲು ಬಯಸಿದರೆ ಬಿಜೆಪಿ ಅಗತ್ಯದ ಬಗ್ಗೆ ಅರಿವು ಮೂಡಿಸಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ಹೆಚ್ಚುತ್ತದೆ, ಗೋಹತ್ಯೆ, ಧಾರ್ಮಿಕ ಮತಾಂಧರ ವಿರುದ್ಧದ ಕಾನೂನು ಹಿಂಪಡೆಯುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಭಯೋತ್ಪಾದಕರ ಪಕ್ಷ, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ಭಯೋತ್ಪಾದಕರಿಗೆ ಫೀಲ್ಡ್ ಡೇ ಆಗುತ್ತದೆ. ರೌಡಿಗಳು ರಸ್ತೆಗೆ ಇಳಿಯುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.

*ರಾಜ್ಯದಲ್ಲಿ ಒಮಿಕ್ರಾನ್ ಉಪತಳಿ ಮೊದಲ ವೈರಸ್ ಪತ್ತೆ*

https://pragati.taskdun.com/omicran-variantxbb-1-5foundkarnataka/

Related Articles

Back to top button