ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಿ.ಎಲ್.ಸಂತೋಷ್ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸುಳ್ಳು ಆರೋಪ ಮಾಡುತ್ತಿದ್ದಾರೆ. ಯಾರೋ ಒಬ್ಬರ ನಿರ್ಣಯದಂತೆ ನಮ್ಮಲ್ಲಿ ಅಭ್ಯರ್ಥಿ ಆಯ್ಕೆಯಾಗಲ್ಲ, ನಮ್ಮದು ರಾಷ್ಟ್ರೀಯ ಪಕ್ಷ, ಒಮ್ಮತದ ಅಭಿಪ್ರಾಯದ ಮೇಲೆ ಚುನವಣಾ ಪ್ರಕ್ರಿಯೆ ನಡೆಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೆಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಬಿಜೆಪಿಯಲ್ಲಿ ಮತಗಟ್ಟೆ, ಕಾರ್ಯಕರ್ತರ ವೋಟ್ ಮೂಲಕ ಅಭಿಪ್ರಾಯ ಸಂಗ್ರಹಿಸುತ್ತೇವೆ. ಶೆಟ್ಟರ್ ಪಾರ್ಟಿ ಅಧ್ಯಕ್ಷರಾಗಿದ್ದವರು ಅವರಿಗೆ ಸಾಮೂಹಿಕ ನಾಯಕತ್ವದ ಬಗ್ಗೆ ಗೊತ್ತಿದೆ. ಈಗ ಪಕ್ಷದಿಂದ ಹೊರ ಹೋಗಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.
ಬಿ.ಎಲ್.ಸಂತೋಷ್ ಪಕ್ಷದ ಸಂಘಟಕರಾಗಿದ್ದಾರೆ.ನಮ್ಮಲ್ಲಿ ಸಂಸದೀಯ ಮಂಡಳಿ, ಎಲೆಕ್ಷನ್ ಕಮಿಟಿ ಮೂಲಕ ಅಭ್ಯರ್ಥಿ ಆಯ್ಕೆಯಾಗುತ್ತೆ. ರಾಷ್ಟ್ರದಲ್ಲಿ ನಮ್ಮ ಪಕ್ಷಕ್ಕೆ ಅದರದ್ದೇ ಆದ ಕೆಲವು ನಿಯಮಗಳಿವೆ. ಮಾನಸಿಕವಾಗಿ ಯಾವುದೋ ಕಾರಣಕ್ಕೆ ಶೆಟ್ಟರ್ ಪಕ್ಷ ತೊರೆದಿದ್ದಾರೆ. ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತೆ ಎಂಬುದನ್ನು ಕಾದು ನೋಡ್ತೀವಿ. ರಾಷ್ಟ್ರೀಯ ನಾಯಕರು ಮನೆ ಬಾಗಿಲಿಗೆ ಹೋದರೂ ಗೌರವ ಕೊಡಲಿಲ್ಲ. ಹಿರಿಯರ ಮನವೊಲಿಕೆ ನಂತರವೂ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ