Latest

ತಾಕತ್ತಿದ್ದರೆ ಸಿದ್ದರಾಮಯ್ಯ ಮತ್ತೆ ಬಾದಾಮಿಯಲ್ಲಿ ಸ್ಪರ್ಧಿಸಲಿ; ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭಿಸಿದೆ. ಇದರಿಂದ ಯಾವುದೇ ಪ್ರಯೋಜನವಾಗದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಬೇರೆ ಬೇರೆ ಪಕ್ಷದವರು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಚುನಾವಣೆ ವೇಳೆ ಕಾಂಗ್ರೆಸ್ ಮನೆ ಖಾಲಿಯಾಗಲಿದೆ. ಜೆಡಿಎಸ್ ಪಕ್ಷ ರಾಜ್ಯದಲ್ಲಿಯೇ ಇರಲ್ಲ ಎಂದು ವಾಗ್ದಾಳಿ ನಡೆಸಿದರು.

Related Articles
Home add -Advt

ಟಿಪ್ಪು ಜಯಂತಿ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಶಾಪ ತಟ್ಟಿದೆ. ಅದಕ್ಕಾಗಿಯೇ ಸಿದ್ದರಾಮಯ್ಯನವರಿಗೆ 2023ರ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಸಿಗುತ್ತಿಲ್ಲ. ತಾಕತ್ತಿದ್ದರೆ ಸಿದ್ದರಾಮಯ್ಯ ಮತ್ತೆ ಬಾದಾಮಿಯಲ್ಲಿ ಸ್ಪರ್ಧಿಸಲಿ ಎಂದು ಸವಾಲು ಹಾಕಿದರು.

ಬಾದಾಮಿಯಲ್ಲಿ ಸ್ಪರ್ಧಿಸಿದರೆ ಅಲ್ಲಿನ ಜನ ಅವರನ್ನು ಸೋಲಿಸಿ ಕಾಡಿಗೆ ಕಳುಹಿಸುತ್ತಾರೆ. ಸಿದ್ದರಾಮಯ್ಯ ಗೋಹತ್ಯೆ ಪರ ನಿಂತ ಖಳನಾಯಕ. ಬೆಡವಾದ ಟಿಪ್ಪು ಜಯಂತಿ ಮಾಡಿ ಮೂವರ ಹತ್ಯೆಗೆ ಕಾರಣರಾದರು. ಸಿದ್ದರಾಮಯ್ಯ ಅವಧಿಯಲ್ಲಿ ಪಿಎಫ್ ಐ ಸಂಘಟನೆ ವಿಜೃಂಭಿಸಿತು. ತಮ್ಮದೇ ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ಮಾಡಿಸಲಾಯಿತು ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅನೈತಿಕ ಮೈತ್ರಿ ಮಾಡಿಕೊಂಡಿದ್ದರು. ಅಧಿಕಾರದಲ್ಲಿದ್ದಾಗಲೂ ಯಾವುದೇ ಅಭಿವೃದ್ಧಿಕಾರಗಳನ್ನು ಮಾಡಲಾಗಿಲ್ಲ. ಈಗ ಯಾತ್ರೆಗಳನ್ನು ಮಾಡಲು ಹೊರಟಿದ್ದಾರೆ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದರು.

ನಾನು ಬಾಂಡ್ ತೆಗೆದುಕೊಂಡ್ರೆ ನಿಮಗೇನ್ ನೋವು?; ಬಿಜೆಪಿ ನಾಯಕರ ವಿರುದ್ಧ ಡಿ.ಕೆ.ಶಿವಕುಮಾರ್ ಕಿಡಿ

https://pragati.taskdun.com/politics/d-k-shivakumarattackbjp/

Related Articles

Back to top button