Kannada NewsKarnataka NewsLatestPolitics

*ಭಾಗ್ಯಗಳನ್ನು ನೀಡಲಾಗದೇ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ವಿರುದ್ಧ ನಳೀನ್ ಕಟೀಲ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪ್ರಧಾನಿಯವರನ್ನು ಕೇಳಿ 10 ಕೆಜಿ ಅಕ್ಕಿ ಕೊಡುತ್ತೇನೆ ಅಂದಿದ್ದಾರಾ? ಕೇಂದ್ರದ 5 ಕೆಜಿ ಹಾಗು ರಾಜ್ಯದ 10 ಕೆಜಿ ಸೇರಿ ಒಟ್ಟು 15 ಕೆಜಿ ಅಕ್ಕಿ ಕೊಡುತ್ತಾರೆ ಎಂದು ನಾವು ಅಂದುಕೊಂಡಿದ್ದೆವು. ಆದರೆ ಈಗ ಕೇಂದ್ರದ ಮೆಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಜನರಿಗೆ ಕೊಟ್ಟ ಭರವಸೆಯಂತೆ ಈಗ ಅಕ್ಕಿ ಕೊಡಲಿ. ಸಿದ್ದರಾಮಯ್ಯ ಇದೇ ಮೊದಲ ಬಾರಿ ಸಿಎಂ ಆಗಿಲ್ಲ, ಈ ಹಿಂದೆಯೂ ಆಗಿದ್ದರು. ಈ ಹಿಂದೆ ಆಗದ ಸಮಸ್ಯೆ ಈಗ್ಯಾಕೆ ಆಗುತ್ತಿದೆ? ಕೇಂದ್ರ ಅಕ್ಕಿ ಕೊಟ್ಟಾಗ ಸಿದ್ದರಾಮಯ್ಯ ತಮ್ಮ ಫೋಟೋ ಹಾಕಿಕೊಂಡರು ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸಿದ್ದು ಯಾರು? ಭಾಗ್ಯಗಳನ್ನು ನೀಡಲು ಆಗದೇ ಅವರೇ ಸಮಸ್ಯೆಗೆ ಸಿಲುಕಿದ್ದಾರೆ. ಕಾಂಗ್ರೆಸ್ ಸರ್ಕಾರ ನಡೆಸಲು ವಿಫಲವಾಗಿದೆ. ಈಗ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.


Home add -Advt

Related Articles

Back to top button